ಕೆ.ಆರ್ ನಗರ ‘ಸಂತ್ರಸ್ತೆ ಕಿಡ್ನ್ಯಾಪ್’ ಕೇಸ್: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಕೆ ಆರ್ ನಗರದಲ್ಲಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದಂತ ಮೂವರು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಕೆ ಆರ್ ನಗರದಲ್ಲಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಮಧು, ಮನು ಹಾಗೂ ಸುಜಯ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು.

ಈ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ಇಂದು ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರು, ಮಧು, ಮನು ಹಾಗೂ ಸುಜಯ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಇನ್ನೂ ಇದೇ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೆ ಒಳಗಾಗಿರುವಂತ ಸತೀಶ್ ಬಾಬುಗೆ ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಕಾರಣ, 4 ದಿನ ಎಸ್‌ಐಟಿ ಕಸ್ಟಡಿಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಸತೀಶ್ ಬಾಬು ಬಿಟ್ಟು ಮೂವರಿಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

Latest Indian news

Popular Stories