Bengaluru Urban

ಬೇಡಿಕೆ ಈಡೇರಿಸದಿದ್ದರೆ ಮುಷ್ಕರ : ಸರ್ಕಾರಕ್ಕೆ ಎಚ್ಚರಿಕೆ ನೀಡಿದ ‘KSRTC’ & ‘BMTC’ ನೌಕರರು

ಬೆಂಗಳೂರು: ಕಳೆದ 38 ತಿಂಗಳಿನಿಂದ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ ಎಂದು ಆಗ್ರಹಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಮುಷ್ಕರ ಮಾಡಲಾಗುತ್ತದೆ ಎಂದು KSRTC ಮತ್ತು BMTC ಸಾರಿಗೆ ನೌಕರರು ಮುಷ್ಕರಕ್ಕೆ ಸಿದ್ಧರಾಗುತ್ತಿರುವ ಬಗ್ಗೆ ಜಂಟಿ ಕ್ರಿಯಾ ಸಮಿತಿ ಮತ್ತೊಮ್ಮೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಹೌದು 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು, ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ‌ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ.

ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರುಪಾಯಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೊಮ್ಮೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಈ ಕುರಿತಂತೆ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಮಾತನಾಡಿ,ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ನಾವು ನೌಕರರಿಗೆ ಹೇಳಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಮುಷ್ಕರ ವಾಪಸ್ಸು ಪಡೆಯಲ್ಲ. ಇದು ಬಹಳ ಸ್ಪಷ್ಟ, ನೌಕರರು ಮುಷ್ಕರಕ್ಕೆ ಸಿದ್ಧರಾಗಿದ್ದಾರೆ.

ನಾವು ಈಗ ಮುಷ್ಕರದ ದಿನಾಂಕ ಘೋಷಣೆ ಮಾಡುವುದಷ್ಟೇ ಬಾಕಿ. ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ದರಾಗಿದ್ದಾರೆ. ನಾವು ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button