ಆಮಿಷ’ ಒಡ್ಡುವುದು ‘ಬೆದರಿಕೆ’ ಹಾಕುವುದು ‘ಕಾಂಗ್ರೆಸ್ ಸಂಸ್ಕೃತಿ’ : ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖೆ 106 ರಲ್ಲಿ ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಶಾಸಕರಿಂದ ಮತದಾನ ನಡೆಯುತ್ತಿದೆ. ತಂಡಗಳಾಗಿ ಬಂದು ಶಾಸಕರು ಮತದಾನ ಮಾಡುತ್ತಿದ್ದಾರೆ. ಇದುವರೆಗೂ 102 ಮತಗಳು ಚಲಾವಣೆಯಾಗಿವೆ ಎಂದು ತಿಳಿದುಬಂದಿದೆ.

ಮತದಾನ ಮಾಡಿದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಆಮಿಷ ಒಡ್ಡುವುದು ಬೆದರಿಕೆ ಹಾಕುವುದು ಕಾಂಗ್ರೆಸ್ ಸಂಸ್ಕೃತಿ ಎಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು ನಮ್ಮ ಶಾಸಕರು ಬದ್ಧತೆಯನ್ನು ಉಳಿಸಿಕೊಂಡಿದ್ದಾರೆ ನಮ್ಮ ಶಾಸಕರನ್ನ ಒಡೆಯಲು ಇವರು ಹೊರಟಿದ್ದರು ನಮ್ಮಲ್ಲಿರುವ 19 ಶಾಸಕರು ಒಗ್ಗಟ್ಟಾಗಿದ್ದೇವೆ. ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಕಳೆದ ಮೇನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೆಡಿಎಸ್ 12 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ. ಅವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರಲು ಆವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರಲು ತಯಾರಾಗಿದ್ದಾರೆ ಎಂದು ಕಳೆದ 10 ತಿಂಗಳಿಂದ ಸತತವಾಗಿ ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಅಲ್ಲದೇ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಡುತ್ತೇವೆ ಎಂದು ಆಮೀಷಗಳನ್ನು ಒಡ್ಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಆರೋಪಿಸಿದರು.

Latest Indian news

Popular Stories