ಮಲ್ಲಿಕಾರ್ಜುನ ಖರ್ಗೆ’ ಕಂಡರೆ ‘ಮೋದಿ’ಗೆ ಭಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, “ಇಂದು ಸಂಜೆ ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. 19ರಂದು ಸಿಇಸಿ ಸಭೆ ನಡೆಯಲಿದ್ದು, 20ರಂದು ಪಟ್ಟಿ ಅಂತಿಮವಾಗಬಹುದು” ಎಂದು ತಿಳಿಸಿದರು.

“ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು 21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು” ಎಂದು ತಿಳಿಸಿದರು.

Latest Indian news

Popular Stories