ಬೆಂಗಳೂರು ಮತ್ತು ಮೈಸೂರಿನ ಹಲವೆಡೆ ಬಿಲ್ಡರ್ ಮನೆ ಮೇಲೆ ದಾಳಿ

ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಜಾರಿ ನಿರ್ದೇಶನಾಲಯ ( ಇಡಿ) ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಬಿಲ್ಡರ್ ಗಳ ಮನೆ ಮೇಲೆ ದಾಳಿ ನಡೆಸಿದೆ.

ಬೆಂಗಳೂರು ನಗರದ ಮಲ್ಲೇಶ್ವರಂ, ಬನ್ನೇರುಘಟ್ಟ ರೋಡ್, ಹನುಮಂತನಗರ ಸೇರಿದಂತೆ ಹಲವು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಅಂತ ತಿಳಿದು ಬಂದಿದೆ.

ಬೆಂಗಳೂರು ಹಾಗೂ ಮೈಸೂರಿನ 11 ಕಡೆ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಅಂತ ತಿಳಿದು ಬಂದಿದೆ. ಬಿಲ್ಡರ್ ಗಳು ಸೈಟ್ ಕೊಡಿಸುವುದಾಗಿ ವಂಚಿಸಿ ಅವ್ಯವಹಾರ ಎಸಗಿದ ಆರೋಪದ ಹಿನ್ನಲೆಯಲ್ಲಿ ಈ ದಾಳಿಯನ್ನು ಇಡಿ ಅಧಿಕಾರಿಗಳು ನಡೆಸಿದ್ದಾರೆ ಎನ್ನಲಾಗಿದೆ

Latest Indian news

Popular Stories