ಮೈಸೂರು :ಮಾ.17 ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾ.17 ರ ನಂತರ ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ.
ಬಹಿರಂಗ ಚುನಾವಣೆ ಪ್ರಚಾರಕ್ಕೂ ಹೋಗಲ್ಲ, ಆದರೆ ಎಲ್ಲರೂ ಬಿಜೆಪಿಗೆ ಬೆಂಬಲ ನೀಡಿ ಎಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಮತ್ತೊಬ್ಬ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರು ಮುಂದಿನ ವರ್ಷ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದರು. ಮಾರ್ಚ್ 17, 2024ಕ್ಕೆ ನಾನು ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷವಾಗುತ್ತದೆ. ಅಂದೆ ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ಅವರು ಹೇಳಿದ್ದರು.