ಬೆಂಗಳೂರು: ಕನ್ನಡ ಭಾಷೆಯಲ್ಲಿಯೇ ಸಹಾಯಕ ಲೋಕೋ ಪೈಲಟ್ ಹುದ್ದೆಯ ಮುಂಬಡ್ತಿ ಪರೀಕ್ಷೆ ನಡೆಸಲು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವರ ನಿರ್ದೇಶನದಂತೆ ಕನ್ನಡದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
ಆಗಸ್ಟ್ 3ರಂದು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಿಗದಿಯಾಗಿದ್ದು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.
ಕನ್ನಡದಲ್ಲಿಯೂ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಸಚಿವರಿಂದ ಸೂಚನೆ ನೀಡಲಾಗಿದ್ದು, ಶೀಘ್ರವೇ ದಿನಾಂಕ ಮರು ನಿಗದಿಪಡಿಸಿ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೆ ಮುಂದಾಗಿದೆ.