ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ರೀತಿಯಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಫೆ.21ರಿಂದ ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಆನೇಕಲ್ ಸಮೀಪ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ.

ಹರ್ಷಿತ್ ಮೃತ ವಿದ್ಯಾರ್ಥಿ. ತಮಿಳುನಾಡಿನ ಗುಮ್ಮಳಾಪುರದ ಹಾಸ್ಟೇಲ್ ನಲ್ಲಿದ್ದು ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ಫೆ.21ರಿಂದ ಕಾಣೆಯಾಗಿದ್ದ.ಬಿ.ಟೆಕ್ ವಿದ್ಯಾರ್ಥಿ ನಾಪತ್ತೆಯಾಗಿರುವ ಬಗ್ಗೆ ತಮಿಳುನಾಡಿನ ತಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಆನೇಕಲ್ ಬಳಿಯ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿ ಶವ ಸುಟ್ಟುಹಾಕಿರುವ ರೀತಿಯಲ್ಲಿ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಆನೇಕಲ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ವೇಳೆ ಮೃತದೇಹದ ಬಳಿ ವಿದ್ಯಾರ್ಥಿಯ ಬ್ಯಾಗ್, ದಾಖಲೆಗಳು ಕಂಡುಬಂದಿವೆ.

ಇದನ್ನು ಪರಿಶೀಲಿಸಿದಾಗ ಈತ ಗುಮ್ಮಳಾಪುರ ಹಾಸ್ಟೇಲ್ ನಿಂದ ಕಾಣೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಪೊಲೀಸರು ತನಿಖೆ ನಡೆಸಿದ್ದಾರೆ

Latest Indian news

Popular Stories