ಶಾಸಕ ‘ಜನಾರ್ದನ ರೆಡ್ಡಿ’ ಬಿಜೆಪಿ ಸೇರ್ಪಡೆ ಫಿಕ್ಸ್

ಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತಷ್ಟು ಬಲ ಬಂದಿದ್ದು, ಶಾಸಕ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ಶಾಸಕ ಜನಾರ್ದನ ರೆಡ್ಡಿ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ ಸೇರ್ಪಡೆ ಕುರಿತಂತೆ ಚರ್ಚೆ ಶುರುವಾಗಿತ್ತು.

ಕೆಲ ದಿನಗಳ ಹಿಂದೆಯೇ ಅಮಿತ್ ಶಾ ಅವರನ್ನು ಭೇಟಿಯಾಗಿ ರಹಸ್ಯವಾಗಿ ಮಾತುಕತೆ ನಡೆಸಿದ್ದರು. ಇದೀಗ ಯಾವುದೇ ಷರುತ್ತುಗಳಿಲ್ಲದೇ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ.

ನಾಳೆಯೇ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ತಮ್ಮ ಪಕ್ಷದ ಪ್ರಮುಖರ ಜೊತೆಗೆ ಚರ್ಚೆ ನಡೆಸಿದ್ದಾರೆ. ನಾಳೆ ಬಿಜೆಪಿ ಪ್ರಮುಖ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

Latest Indian news

Popular Stories