ಜೆಡಿಎಸ್‌ಗೆ ಭವಿಷ್ಯ ಇಲ್ಲ ಎಂಬುದನ್ನು ಇಲ್ಲಿನ ಶಾಸಕರೇ ತೋರಿಸಿದ್ದಾರೆ: ಡಿ.ಕೆ.ಶಿವಕುಮಾರ್

ಚೆನ್ನಪಟ್ಟಣ (ಏ.23): ಜೆಡಿಎಸ್‌ಗೆ ಭವಿಷ್ಯ ಇಲ್ಲ ಎಂಬುದನ್ನು ಇಲ್ಲಿನ ಶಾಸಕರೇ ತೋರಿಸಿದ್ದಾರೆ. ಇವತ್ತು ಅವರ ಭಾವಮೈದನನ್ನ ಅಂದರೆ ದೇವೇಗೌಡರ ಅಳಿಯನನ್ನು ಬೇರೆ ಪಕ್ಷದಿಂದ ಚುನಾವಣೆಗೆ ನಿಲ್ಲಿಸಿದ್ದಾರೆ. ತಮ್ಮ ಕುಟುಂದವರನ್ನು ಮುಖ್ಯಮಂತ್ರಿ ಮಾಡಿದ, ಪ್ರಧಾನಿ ಮಾಡಿದ ಜಿಲ್ಲೆಯನ್ನು ತೊರೆದು ಬೇರೆ ಜಿಲ್ಲೆಗೆ ಹೋಗಿ ಸ್ಪರ್ಧಿಸಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಮಾತನಾಡಿದರು.

ಕುಮಾರಸ್ವಾಮಿಗೆ ಧೈರ್ಯವಿದ್ದರೆ, ತಮ್ಮ ಕರ್ಮಭೂಮಿ ಎಂದು ಹೇಳುವ ಅವರು ಇಲ್ಲಿಂದಲೇ ಸ್ಪರ್ಧಿಸಬೇಕಿತ್ತು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ದೇವೇಗೌಡರ ಅಳಿಯ ಡಾ.ಮಂಜುನಾಥ್, ಹಾಸನದಿಂದ ಅವರ ಮೊಮ್ಮಗ, ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ನನ್ನ ಸಮೀಕ್ಷೆ ಪ್ರಕಾರ ಈ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ೨೦೧೩ರಲ್ಲೂ ಇದೇ ರೀತಿ ಮಾಡಿದ್ದರು: ೨೧೦೩ರಲ್ಲೂ ಸಹ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ-ಜೆಡಿಎಸ್ ಸೇರಿ ಅನಿತಾ ಕುಮಾರಸ್ವಾಮಿಯನ್ನು ನಿಲ್ಲಿಸಿದರು. ಆದರೂ, ಜನಬೆಂಬಲದಿಂದ ನಾವು ಗೆಲುವು ಸಾಧಿಸಿದೆವು ಎಂದರು.
ಚುನಾವಣೆ ನಂತರ ಮೈತ್ರಿ ಪಕ್ಷದಲ್ಲಿ ಜಗಳ: ಇಂದು ಇವರು ಮೈತ್ರಿ ಮಾಡಿಕೊಂಡಿರಬಹುದು. ಆದರೆ, ಇಬ್ಬರಿಗೂ ಪರಸ್ಪರ ಪಕ್ಷಗಳ ನಡುವೆ ನಂಬಿಕೆ ಇಲ್ಲ. ಚುನಾವಣೆ ಮುಗಿದ ನಂತರ ಹಳ್ಳಿಹಳ್ಳಿಗಳಲ್ಲಿ ಜೆಡಿಎಸ್-ಬಿಜೆಪಿ ನಡುವೆ ಜಗಳ ಆರಂಭಗೊಳ್ಳುತ್ತದೆ. ಇದು ಅಕ್ಷರಶ ಸತ್ಯ ಎಂದರು.

ಎಚ್‌ಡಿಕೆಯನ್ನು ಸಿಎಂ ಮಾಡಿದೆವು: ಹಾಸನದಿಂದ ಬಂದವರಿಗೆ ನಮ್ಮ ಜಿಲ್ಲೆಯಲ್ಲಿ ಅವಕಾಶ ಮಾಡಿಕೊಟ್ಟಿದ್ದೇವೆ. ೨೦೧೮ರಲ್ಲಿ ನಾನೇ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸೂಚಿಸಿದ್ದೆ. ೩೮ ಸ್ಥಾನ ಇದ್ದವರಿಗೆ ನಾವು ಅವಕಾಶ ಮಾಡಿಕೊಟ್ಟು ಅವರನ್ನು ಸಿಎಂ ಮಾಡಿದೆವು. ಆದರೆ ಇಂದು ಕುಮಾರಸ್ವಾಮಿ ಅವರು ಅವರನ್ನು ಅಧಿಕಾರದಿಂದ ಇಳಿಸಿದ ಯೋಗೇಶ್ವರ್, ಯಡಿಯೂರಪ್ಪ ಅವರನ್ನೇ ತಬ್ಬಾಡುತ್ತಿದ್ದಾರೆ. ಅವರಿಗೆ ನೀತಿ ಇಲ್ಲ, ಸಿದ್ದಾಂತವಿಲ್ಲ ಎಂದು ಕಿಡಿಕಾರಿದರು.

Latest Indian news

Popular Stories