ಬೆಂಗಳೂರು, ಫೆಬ್ರವರಿ 19: ಕರ್ನಾಟಕ ರಾಜ್ಯದ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ತುತ್ತಾಗುವವರ ಸಂಖ್ಯೆ ಏರುತ್ತಿದೆ. ಒಂದೆರಡು ಸಾವುಗಳು ಸಂಭವಿಸಿದ್ದು, ರೋಗ ವ್ಯಾಪಿಸುವ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಸೋಮವಾರ (ಫೆಬ್ರವರಿ 19) ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ.
ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.ಇತ್ತೀಚಿನ ದಿನಗಳಲ್ಲಿ ರಾಜ್ಯದ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆಯು ಉಲ್ಬಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರೋಗದ ನಿಯಂತ್ರಣ ಹಾಗೂ ಸೂಕ್ತ ಚಿಕಿತ್ಸೆ ಕುರಿತು ಚರ್ಚಿಸಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೇಲ್ಕಂಡ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಭೆ ಇಂದು ಮಧ್ಯಾಹ್ನ 3:00 ಗಂಟೆಗೆ ಬೆಂಗಳೂರಿನ ವಿಕಾಸ ಸೌಧ ಜರುಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.