ಮುಡಾ ಹಗರಣ : `CM’ವಿರುದ್ದ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ..

ಸ್ನೇಹಮಯಿ ಕೃಷ್ಣ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ. ಇದೀಗ ಪೊಲೀಸರು ಇದೀಗ ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎಂದು ಹೇಳಲಾಗುತ್ತಿದೆ.

Latest Indian news

Popular Stories