ಬೆಂಗಳೂರು: ಫೆ. 24 ಮತ್ತು 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಜನವರಿ 26ರಿಂದ 31 ಜಿಲ್ಲೆಗಳಲ್ಲೂ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಯುತ್ತಿದೆ.
ಫೆ. 24 ಮತ್ತು 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿರುವ ಹಿನ್ನೆಲೆ ಅಮೃತ ಉತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದ್ದು, . ಇದೇ ತಿಂಗಳ 25ರಂದು ಕೊನೆಯಾಗುತ್ತದೆ. ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯಲಿದೆ ಎಂದರು. ಭಾರತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿರುವ ದೇಶ. ದೇಶದ ಜನತೆಗಾಗಿ ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ. ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ ಎಂದರು.