ಬೆಂಗಳೂರು: ಕೋರ್ಟ್‌ಗೆ ಗೈರು ಹಿನ್ನಲೆ, ಸಾರಿಗೆ ಸಚಿವ ರಾಮಲಿಂಗರೆಡ್ಡಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ ಅಂತ ತಿಳಿದುಬಂದಿದೆ.
ಬೆಂಗಳೂರಿನ 44ಎಸಿಎಂಎಂ ನ್ಯಾಯಾಲಯವು ಆದೇಶವನ್ನು ಹೊರಡಿಸಿದೆ ಎನ್ನಲಾಗಿದೆ. ಮೇಕೆದಾಟು ಪಾದಯಾತ್ರೆ ವೇಳೇ ಕೋವಿಡ್‌ನಿಯಮವನ್ನು ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ದ ಕೇಸ್ ದಾಖಲು ಮಾಡಲಾಗಿತ್ತು, ಆದರೆ ಅವರು ನ್ಯಾಯಾಲಯಕ್ಕೆ ಬಾರದ ಹಿನ್ನಲೆಯಲ್ಲಿ ಅವರ ವಿರುದ್ದ ಜಾಮೀನು ರಹಿತ ವಾರಂಟ್ ಅನ್ನು ನ್ಯಾಯಾಲಯವು ಹೊರಡಿಸಿದೆ.