ಸಿದ್ಧಸಿರಿ ಎಥೆನಾಲ್ ಘಟಕ ಮುಚ್ಚಲು ಆದೇಶ : ಕೆಎಸ್‌ಪಿಸಿಬಿಗೆ ‘ಹೈ’ ತರಾಟೆ

ಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಎಥೆನಾಲ್ ಘಟಕವನ್ನು ಏಕಾಏಕಿ ಮುಚ್ಚುವಂತೆ ಆದೇಶ ಹೊರಡಿಸಿದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮೊದಲು ಎಥೆನಾಲ್ ಘಟಕ ಆರಂಭಿಸಲು ಅನುಮತಿ ನೀಡಲಾಗಿದ್ದು, ಈಗ ಏಕಾಏಕಿ ಮುಚ್ಚಲು ಆದೇಶ ನೀಡಿದ ಬಗ್ಗೆ ಕಾರಣ ಕೊಡಬೇಕು.
ನಿಮ್ಮ ತೀರ್ಮಾನದ ಹಿಂದಿನ ಕಾರಣ ಜನರಿಗೆ ತಿಳಿಯಬೇಕು ಎಂದು ನ್ಯಾಯಾಲಯ ಹೇಳಿದೆ. ಘಟಕ ಮುಚ್ಚುವಂತೆ ಆದೇಶ ಬಂದ ಬೆನ್ನಲ್ಲೇ ಇದನ್ನು ಪ್ರಶ್ನಿಸಿ ಯತ್ನಾಳ್ ಪುತ್ರ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ಕೃಷ್ಣ.ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಈ ವೇಳೆ ಘಟಕ ಮುಚ್ಚುವುದಕ್ಕೆ ಕಾರಣ ನೀಡುವಂತೆ ಪೀಠವು ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರಶ್ನಿಸಿತು. ಕೆಎಸ್‌ಪಿಸಿಬಿ ಅಧಿಕಾರಿಗಳು ಸಿದ್ಧಸಿರಿ ಎಥೆನಾಲ್ ಘಟಕಕ್ಕೆ ಪರಿಸರ ಅನುಮೋದನೆ ಹಿಂಪಡೆದಿರುವುದರಿಂದ, ಮುಚ್ಚುವಂತೆ ಆದೇಶಿಸಲಾಗಿದೆ. ಈ ಘಟಕವನ್ನು ನಡೆಸಲು ಪರಿಸರ ಇಲಾಖೆ ಅನುಮತಿ ನೀಡಿಲ್ಲ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದರು.

Latest Indian news

Popular Stories