ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್

ಬೆಂಗಳೂರು, ಮಾರ್ಚ್ 28: ಬೆಂಗಳೂರು ನಗರಕ್ಕೆ ಬಿಜೆಪಿಯು ಅಗತ್ಯ ಮೂಲ ಸೌಲಭ್ಯ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ಕಳೆದ ಹತ್ತು ತಿಂಗಳಲ್ಲಿ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಬಾಯ್ ಬಾಯ್ ಬೆಂಗಳೂರು ಮಾಡಿದೆ. ನಿಮಗೆ ನಗರದ ಜನರ ಬಳಿ ಹೋಗಿ ಮತಯಾಚಿಸುವ ಧೈರ್ಯವಿದೆಯೇ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಆರ್‌.ಅಶೋಕ್ ಅವರು ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಸಿದರು. ನಂತರ ಆರ್.ಅಶೋಕ್ ಸುದ್ದಿಗಾರರ ಬಳಿ ಮಾತನಾಡಿದರು.

ಬೆಂಗಳೂರಿನಲ್ಲಿ ಜನರ ಬಳಿ ಹೋಗಿ ಮತ ಯಾಚಿಸುವ ಧೈರ್ಯ ಬಿಜೆಪಿಗೆ ಇದೆ. ಆದರೆ ಕಾಂಗ್ರೆಸ್‌ಗೆ ಅಂತಹ ಧೈರ್ಯವಿಲ್ಲ. ಅಲ್ಲದೆ ಜನರು ಕಾಂಗ್ರೆಸ್‌ಗೆ ಬಾಯ್‌ ಬಾಯ್‌ ಹೇಳಲು ತೀರ್ಮಾನಿಸಿದ್ದಾರೆ. ನೀರಿನ ಸಮಸ್ಯೆ ಸೃಷ್ಟಿಯಾಗಿ ಜನರು ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Latest Indian news

Popular Stories