ಪೋಕ್ಸೋ ಪ್ರಕರಣ : ಇಂದು B.S ಯಡಿಯೂರಪ್ಪ ವಿಚಾರಣೆ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಪೊಲೀಸರು ನಿನ್ನೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಬಿ.ಎಸ್ ಯಡಿಯೂರಪ್ಪ ವಿರುದ್ಧದ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.ಈ ಸಂಬಂಧ ಇಂದು ಯಡಿಯೂರಪ್ಪ ವಿಚಾರಣೆ ನಡೆಯಲಿದೆ.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

Latest Indian news

Popular Stories