ಪೋಕ್ಸೊ ಕೇಸ್ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ‘BSY’ ಗೆ CID ನೋಟಿಸ್

ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿದೆ.

ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ನೋಟಿಸ್ ನೀಡಲಾಗಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು, ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.

Latest Indian news

Popular Stories