ಮಳವಳ್ಳಿ : ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರ ಪಡೆದಿರುವ ಕಾಂಗ್ರೆಸ್ ಸರ್ಕಾರ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಯುವ ಬಿಗ್ರೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಅವರು, ಸುಭದ್ರ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಲು ಎಲ್ಲರೂ ಮುಂದಾಗಬೇಕು ಪ್ರಧಾನಿ ಮೋದಿಯೇ ಮುಂದಿನ ಪ್ರಧಾನಿ ಯಾಗಬೇಕು ಎಲ್ಲರೂ ಮೋದಿಯನ್ನೇ ಆಯ್ಕೆ ಮಾಡಬೇಕು.
ರಾಜ್ಯದ ಮತದಾರರು ಪ್ರಜ್ಞಾವಂತರಾಗಿದ್ದು, ಗ್ಯಾರಂಟಿ ಯೋಜನೆ ನೀಡಿದ ಮಾತ್ರಕ್ಕೆ ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ. ದೇಶ ಸೇವೆಗಾಗಿ ಸದಾ ದುಡಿಯುತ್ತಿರುವ ಮೋದಿ ಅವರನ್ನು ಕಳೆದುಕೊಳ್ಳಬಾರದು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನತೆ ಮೋದಿ ಅವರನ್ನು ಬೆಂಬಿಸುವ ಮೂಲಕ ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನಗಳನ್ನು ರಾಜ್ಯದಿಂದ ಆಯ್ಕೆ ಮಾಡಬೇಕು ಎಂದರು.