ಪ್ರಜ್ವಲ್ SIT ಕಸ್ಟಡಿ ಅಂತ್ಯ, ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು, ಜೂನ್ 10: ಹಾಸನದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹತ್ತು ದಿನಗಳ ಹಿಂದೆ ಬಂಧಿತನಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ ಕಸ್ಟಡಿ ಅವಧಿ ಇಂದು ಅತ್ಯವಾಗಿದೆ. ಇಂದು ಮಧ್ಯಾಹ್ನ ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಲಿದ್ದಾರೆ.

ವಿದೇಶದಿಂದ ಭಾರತಕ್ಕೆ ಮೇ 31ರಂದು ಆಗಮಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಪಡೆದಿತ್ತು. ಅದಾದ ಬಳಿಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ್ದಾರೆ. ಕೃತ್ಯ ಎಸಗಿದ್ದ ಸ್ಥಳ ಮಹಜರು ಮಾಡಲಾಗಿತ್ತು. ಇದರ ಬೆನ್ನಲ್ಲೆ ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಅವಧಿ ಮುಕ್ತಾಯಗೊಂಡಿದೆ.

ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಂದು ಸೋಮವಾರ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣರನ್ನು ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧ ಇನ್ನೂ ಎರಡು ಅತ್ಯಾಚಾರ ಪ್ರಕರಣ ತನಿಖೆ ಬಾಕಿ ಇರುವ ಕಾರಣ ಇಂದು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಅದಕ್ಕಾಗಿ ಎಸ್‌ಐಟಿ ತನಿಖಾಧಿಕಾರಿಗಳು ಪ್ರಕರಣದ ವಿಚಾರಣೆ ಬಾಕಿ ಇದೆ. ಪ್ರಕರಣ ಕುರಿತು ವಶಕ್ಕೆ ಪಡೆದುಕೊಳ್ಳುವ ಅಗತ್ಯತೆ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಿದ್ದಾರೆ. ಪ್ರಜ್ವಲ್ ರೇವಣ್ಣಗೆ ಇಂದು ಮತ್ತೆ ನ್ಯಾಯಾಂಗ ಬಂಧನವಾಗುತ್ತಾ?, ಇಲ್ಲಾ ಎಸ್‌ಐಟಿ ವಶಕ್ಕೆ ಮತ್ತೆ ನೀಡಲಾಗುತ್ತಾ? ಎಂದು ಕಾದು ನೋಡಬೇಕಿದೆ.

Latest Indian news

Popular Stories