ಪ್ರಾಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ವ್ಯಕ್ತಿಗಳಿಗೆ 1,00,000 ನೇಮಕಾತಿ ಪತ್ರಗಳನ್ನು ಇಂದು ನೀಡಲಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ 1ಲಕ್ಷ ಮಂದಿಗೆ ನೇಮಕಾತಿ ಪತ್ರಗಳನ್ನು ನೀಡುತ್ತಿದ್ದಾರೆ.
ಪ್ರಧಾನಿ ಮೋದಿ ಮಿಷನ್ ಕರ್ಮಯೋಗಿಯ ವಿವಿಧ ಘಟಕಗಳ ನಡುವೆ ಸಹಯೋಗವನ್ನು ಬೆಳೆಸುವ ಗುರಿಯನ್ನು ಹೊಂದಿರುವ ಹೊಸದಿಲ್ಲಿಯಲ್ಲಿ ಇಂಟಿಗ್ರೇಟೆಡ್ ಕಾಂಪ್ಲೆಕ್ಸ್ “ಕರ್ಮಯೋಗಿ ಭವನ” ದ ಹಂತ I ಕ್ಕೆ ಇಂದು ಅಡಿಪಾಯ ಹಾಕಲಿದ್ದಾರೆ.
ಕೇಂದ್ರ ಸರ್ಕಾರದ ಇಲಾಖೆಗಳು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿ ಪ್ರಯತ್ನಗಳಿಗೆ ಅನುಕೂಲವಾಗುವಂತೆ ರಾಷ್ಟ್ರಾದ್ಯಂತ 47 ಸ್ಥಳಗಳಲ್ಲಿ ವರ್ಚುವಲ್ ಉದ್ಯೋಗ ಮೇಳ ‘ರೋಜ್‌ಗಾರ್ ಮೇಳ’ವನ್ನು ಆಯೋಜಿಸಲಾಗುವುದು.
ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ನೇಮಕಾತಿಗಳು ನಡೆಯುತ್ತಿವೆ. ದೇಶಾದ್ಯಂತ ಹೊಸದಾಗಿ ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾದವರು ರೈಲ್ವೆ ಸಚಿವಾಲಯ, ಗೃಹ ವ್ಯವಹಾರಗಳು, ಅಂಚೆ ಇಲಾಖೆ, ಕಂದಾಯ ಮತ್ತು ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಕೆಲಸಕ್ಕೆ ಸೇರಿಕೊಳ್ಳಲಿದ್ದಾರೆ.
ದೇಶಾದ್ಯಂತ 47 ಕಡೆಗಳಲ್ಲಿ ಉದ್ಯೋಗ ಮೇಳೆ ನಡೆಯಲಿದೆ. ಉದ್ಯೋಗ ಮೇಳವು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಮತ್ತಷ್ಟು ಉದ್ಯೋಗಾವಕಾಶಗಳನ್ನು ಉತ್ತೇಜಿಸುವ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಯುವಕರನ್ನು ಸಶಕ್ತಗೊಳಿಸುವ ಗುರಿಯನ್ನು ಹೊಂದಿದೆ.