ಮುಡಾ’ ಹಗರಣ ಸಂಬಂಧ ‘ಸಿಎಂ’ ವಿರುದ್ಧ ಖಾಸಗಿ ದೂರು ಕೇಸ್:ಆ.13ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ಆರೋಪಿಯೆಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿ ಆದೇಶಿಸಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪದ ವಿಚಾರವಾಗಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಸ್ನೇಹಮಯಿ ಕೃಷ್ಣ ಎಂಬುವವರ ಖಾಸಗಿ ದೂರು ವಿಚಾರಣೆ ನಡೆಯಿತು. ದೂರುದಾರರ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು. ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಆದಾಗ ಡಿ ನೋಟಿಫಿಕೇಷನ್ ಮಾಡಲಾಗಿದೆ. ಮಾಲೀಕರೇ ಅಲ್ಲದ ವ್ಯಕ್ತಿ ಪರವಾಗಿ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ವಾದಿಸಿದರು.

ಈ ಜಮೀನಿನಲ್ಲಿ ದೇವನೂರು ಬಡಾವಣೆ ರಚನೆಯಾಗಿದೆ. ಸಿಎಂ ಪತ್ನಿಯ ಸಹೋದರ ಜಮೀನನ್ನು ಖರೀದಿಸಿದ್ದಾರೆ. 2004ರಲ್ಲಿ ದೇವರಾಜು ನಿಂದ ಜಮೀನನ್ನು ಖರೀದಿಸಲಾಗಿದೆ. ಆಗಲು ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದರು. ಜಮೀನು ಖರೀದಿಸಿದ ಹಣದ ಮೂಲದ ಬಗ್ಗೆ ಪ್ರಶ್ನೆ ಇದೆ. ದೇವನೂರು ಬಡಾವಣೆಯಲ್ಲಿ ಈಗಲೂ ಖಾಲಿ ನಿವೇಶನಗಳಿವೆ. ಆದರೆ ದುಬಾರಿ ಬೆಲೆಯ ವಿಜಯನಗರ ಬಡಾವಣೆಯಲ್ಲಿ ಬದಲಿ ನಿವೇಶನ ನೀಡಲಾಗಿದೆ.

2006 ರಿಂದ 2010ರ ನಡುವೆ ಈ ಜಮೀನಿನಲ್ಲಿ ಬಡಾವಣೆ ರಚನೆಯಾಗಿತ್ತು. ಬಡಾವಣೆ ರಚನೆಯಾಗಿ ಸೈಟ್ ಗಳನ್ನು ಹಂಚಲಾಗಿತ್ತು.2004 ಕ್ಕೂ ಮುನ್ನವೇ ಬಡಾವಣೆಯಲ್ಲಿ ಮುಡಾ ಅಭಿವೃದ್ಧಿ ಪಡಿಸಿತ್ತು.ಆದರೂ ಈ ಜಮೀನನ್ನು ಭೂ ಪರಿವರ್ತನೆ ಮಾಡಲಾಗಿದೆ. 2010ರಲ್ಲಿ ಸಿಎಂ ಪತ್ನಿಯಿಂದ ಸಹೋದರನಿಂದ ದಾನ ಪತ್ರ ಪಡೆದರು ನಂತರ ಸಿದ್ದರಾಮಯ್ಯ ಸಿಎಂ ಆಗುವವರೆಗೂ ಸುಮ್ಮನಿದ್ದರೂ. 2014ರಲ್ಲಿ ಸಿಎಂ ಆದಾಗ ಪರಿಹಾರದ ನಿವೇಶನ ಕೇಳಿದರು ಮಾರಾಟ ಮಾಡಿದ ದೇವರಾಜು ಜಮೀನು, ಮಾಲೀಕರಲ್ಲ.

ಹೀಗಾಗಿ ಸಿಎಂ ಪತ್ನಿ ಪಾರ್ವತಿ ಬಿ ಎಂ ಕೂಡ ಮಾಲೀಕರಾಗಿರುವುದಿಲ್ಲ ಆದರೂ ಜಮೀನಿಗೆ ಬದರಿ ನಿವೇಶನ ಕೇಳುತ್ತಾರೆ. ಕಾನೂನು ಪ್ರಕಾರ ಸಿಎಂ ಪತ್ನಿಗೆ 14 ನಿವೇಶನದ ಹಕ್ಕು ಇರಲಿಲ್ಲ. ಹಕ್ಕು ಇರದಿದ್ದರೂ ಕೂಡ ಗರಿಷ್ಠ 4200 ಚದರಡಿ ಜಾಗ ಮಾತ್ರ ಪಡೆಯಬಹುದಾಗಿತ್ತು.ಆದರೆ 14 ಸೈಟ್ ಪಡೆದಿರುವುದು ಕಾನೂನು ಬಾಹಿರ. ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಸ್ವಾಧೀನವಾದ ಜಮೀನಿನಲ್ಲಿ ಮಾತ್ರ 4,800 ಅಡಿ ನಿವೇಶನ ಪಡೆಯಬಹುದು ಆದರೆ ದುಬಾರಿ ಮೌಲ್ಯದ ಬಡಾವಣೆಯಲ್ಲಿ 14 ಸೈಟ್ ಹಂಚಲಾಗಿದೆ ಎಂದು ದೂರುದಾರರ ಪರ ಹಿರಿಯವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

Latest Indian news

Popular Stories