ಖಾಸಗಿ ಶಾಲೆಗಳ ಬಂದ್ ಕರೆ: ಮಹತ್ವದ ಸಭೆ ಕರೆದ ಶಿಕ್ಷಣ ಸಚಿವರು

ಶಿವಮೊಗ್ಗ, ಆಗಸ್ಟ್‌ 07: ಕರ್ನಾಟಕದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಆಗಸ್ಟ್ 21ರಿಂದ ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡುವುದಾಗಿ ಹೇಳಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದೆ. ಆದ್ದರಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಮಹತ್ವದ ಸಭೆಯನ್ನು ಕರೆದಿದ್ದಾರೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬುಧವಾರ ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕವನ್ನು ಉದ್ಘಾಟಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.

ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಆಗಸ್ಟ್ 15ರಂದು ಕರಾಳ ದಿನಾಚರಣೆಗೆ ಕರೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಅವರು ಆಚರಣೆ ಮಾಡಲಿ, ಆ ಹಕ್ಕು ಅವರಿಗಿದೆ. ಅವರ ಎಲ್ಲಾ ಮನವಿಗೆ ಸ್ಪಂದಿಸಿದ್ದೇವೆ, ಸಮಸ್ಯೆಗೆ ಪರಿಹರಿಸಿದ್ದೇವೆ” ಎಂದರು.

Latest Indian news

Popular Stories