11170 ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೇವಾ ಭದ್ರತೆ” : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು:ರಾಜ್ಯದ ಗ್ರಾಮಪಂಚಾಯತಿಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 11,170 ಸಿಬ್ಬಂದಿಗೆ ಸೇವಾ ಭದ್ರತೆ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಕನಿಷ್ಠ ವೇತನ,ರಜೆ ಸೌಲಭ್ಯ,ವೈದ್ಯಕೀಯ ಸೌಲಭ್ಯ,ಸೇವಾ ಭದ್ರತೆ
,ಅನುಕಂಪದ ಮೇಲೆ ಕುಟುಂಬಸ್ಥರನ್ನು ನೇಮಕ,ಪಿಂಚಣಿ ಸೌಲಭ್ಯ,ಸಕಾಲದಲ್ಲಿ ವೇತನ ಸೇರಿದಂತೆ ವಿವಿಧ ಸೌಲಭ್ಯಗಳು ಇನ್ಮುಂದೆ ಗ್ರಾಮ ಪಂಚಾಯತಿ ಸಿಬ್ಬಂದಿಗೆ ದೊರೆಯಲಿವೆ.

ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು,”ಈ ರೀತಿ ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಸಬಲಗೊಳಿಸುವ ಹಾಗೂ ಹೆಚ್ಚು ಉತ್ತರದಾಯಿಯಾಗಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳನ್ನು ಸರಾಗವಾಗಿ ಒದಗಿಸುವ ನಿಟ್ಟಿನಲ್ಲಿ ಈ ಕ್ರಾಂತಿಕಾರಿ ಹೆಜ್ಜೆಯನ್ನು ಇಡಲಾಗಿದೆ.” ಎಂದಿದ್ದಾರೆ.

Latest Indian news

Popular Stories