ಬೆಂಗಳೂರು: ಜನವರಿ 22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಕನ್ನಡಪರ ಸಂಘಟನೆಗಳು ಮನವಿ ಸಲ್ಲಿಸಿದೆ.
ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕನ್ನಡಪರ ಸಂಘಟನೆಗಳು ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಇರುವುದರಿಂದ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ಕನ್ನಡಪರ ಸಂಘಟನೆಗಳು ಮನವಿ ಸಲ್ಲಿಸಿದೆ.
ಜನವರಿ 22ರಂದು ಅಯೋಧ್ಯೆ ಶ್ರೀ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಲಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಒತ್ತಾಯಿಸಿದ್ದಾರೆ . ಕೇಂದ್ರ ಸರ್ಕಾರ ಜ. 22 ರಂದು ಅರ್ಧ ದಿನ ರಜೆ ಘೋಷಿಸಿದೆ.