ಯಾರದೋ ದುಡ್ಡು ತೆಲಂಗಾಣದಲ್ಲಿ ಕಾಂಗ್ರೆಸ್ ಜಾತ್ರೆ ಮಾಡುತ್ತಿದೆ’ : ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಳಗಾವಿ : ತೆಲಂಗಾಣ ವಿಧಾನಸಭಾ ಚುನಾವಣೆಗೆ ಕರ್ನಾಟಕದಿಂದ ದುಡ್ಡು ತೆಗೆದುಕೊಂಡು ಹೋಗಿ ಜಾಹೀರಾತು ನೀಡಿ ಪ್ರಚಾರ ಮಾಡಿದೆ ಎಂದು ಆರೋಪಿಸಿ ಯಾರದೋ ದುಡ್ಡು ತೆಲಂಗಾಣದಲ್ಲಿ ಕಾಂಗ್ರೆಸ್ ಜಾತ್ರೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಳಗಾವಿಯಲ್ಲಿ ಇಂದಿನಿಂದ ನಡೆಯುವುವ ವಿಧಾನಸಭಾ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬರ ಪರಿಹಾರದಲ್ಲಿ ಮೊಸಳೆ ಕಣ್ಣೀರು ಸುರಿಸುತ್ತಿದೆ.
ರೈತರ ಹೆಸರಿನ ಮೇಲೆ ಅಧಿಕಾರಕ್ಕೆ ಬಂದು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಕನ್ನಡಿಗರ ದುಡ್ಡು ತೆಗೆದುಕೊಂಡು ಹೋಗಿ ಅಲ್ಲಿ ಜಾಹೀರಾತನ್ನು ನೀಡುತ್ತಿದ್ದಾರೆ. ಯಾರದ್ದೋ ದುಡ್ಡು ತೆಲಂಗಾಣದಲ್ಲಿ ಕಾಂಗ್ರೆಸ್ ಜಾತ್ರೆ ಮಾಡುತ್ತಿದೆ.

ಈ ಸರ್ಕಾರ ಮೋದಿ ಮಸ್ತಿ ಮಾಡುತ್ತ ಸುತ್ತುವುದನ್ನೆ ಮಾಡುತ್ತಿದೆ. ಇದೊಂದು ಕಳಪೆ ಸರ್ಕಾರ ಈ ಸರ್ಕಾರದಲ್ಲಿ 60 ಹಗರಣಗಳು ನಡೆದಿದೆ.ಅಧಿಕಾರಿಗಳ ವರ್ಗಾವಣೆ ದಂದೇ ಹಲೋ, ಅಪ್ಪ ಪ್ರಕರಣ ಸೇರಿದಂತೆ ಒಟ್ಟು 60 ಹಗರಣಗಳು ನಡೆದಿವೆ ಎಂದು ಬೆಳಗಾವಿಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Latest Indian news

Popular Stories