ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲವರು ನಿನ್ನೆ ಡಿಸ್ಚಾರ್ಜ್ ಆದರೆ ಕೆಲವರು ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ ಎ ಎಲ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿವಿಧ ತನಿಖಾ ತಂಡಗಳು ಘಟನಾ ಸ್ಥಳಕ್ಕ ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ