ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ‘FSL ತಜ್ಞ’ರಿಂದ ಮರುಪರಿಶೀಲನೆ

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಎನ್‌ಐಎ ತನಿಖೆಗೆ ವಹಿಸಿದೆ. ಈ ಮೊದಲು ಸಿಸಿಬಿಗೆ ತನಿಖೆಯನ್ನು ವರ್ಗಾಹಿಸಿ ಆದೇಶಿಸಿತ್ತು. ಇದೀಗ ಎನ್‌ಐಎಗೆ ಪ್ರಕರಣ ವರ್ಗಾವಣೆಗೊಂಡ ಬೆನ್ನಲ್ಲೇ ಮತ್ತೆ ಕೆಫೆಯಲ್ಲಿ ಎಫ್‌ಎಸ್‌ಎಲ್ ತಜ್ಞರಿಂದ ಶೋಧ ಕಾರ್ಯವನ್ನು ಆರಂಭಿಸಲಾಗಿದೆ.

ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕೆಫೆಗೆ ಮತ್ತೆ ಲಗ್ಗೆ ಇಟ್ಟಿರುವಂತ ಎಫ್‌ಎಸ್‌ಎಲ್ ತಜ್ಞರ ತಂಡವು, ಕೆಫೆಯಲ್ಲಿನ ಗಾಜು, ಹೋಟೆಲ್ ವಸ್ತುಗಳು ಸೇರಿದಂತೆ ಪ್ರತಿಯೊಂದನ್ನು ಸೂಕ್ಷ್ಮವಾಗಿ ಪರೀಶಿಲಿಸಿ, ಮಾದರಿಗಳನ್ನು ಸಂಗ್ರಹಿಸುತ್ತಿದೆ.

ಬಾಂಬ್ ಸ್ಪೋಟಗೊಂಡಂತ ಕೆಫೆಯ ಸ್ಥಳದ ಸುತ್ತಮುತ್ತಲಿನ ಪ್ರತಿಯೊಂದು ವಸ್ತುಗಳನ್ನು ಎಫ್‌ಎಸ್‌ಎಲ್ ತಂಡವು ಮತ್ತೊಮ್ಮೆ ಪರಿಶೀಲಿಸಿ, ಅಲ್ಲಿ ಸಿಕ್ಕಂತ ಗಾಜಿನ ಪೀಸ್ ಸೇರಿದಂತೆ ವಿವಿಧ ವಸ್ತುಗಳನ್ನು ಸಂಗ್ರಹಿಸುತ್ತಿರೋದಾಗಿ ತಿಳಿದು ಬಂದಿದೆ.

ಅಂದಹಾಗೇ ರಾಜ್ಯ ಸರ್ಕಾರದಿಂದ ಬಿಜೆಪಿ ನಾಯಕರ ಆಗ್ರಹ ಕಾರಣ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ತನಿಖೆಗೆ ವಹಿಸಿದೆ.

Latest Indian news

Popular Stories