ರೆಮಲ್ ಭೀತಿ ನಾಳೆ ಭಾರಿ ಮಳೆ ಸಾಧ್ಯತೆ; ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಶನಿವಾರ (ಮೇ 25) ಬೆಳಗ್ಗೆ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ ) ಮೂನ್ಸೂಚನೆ ನೀಡಿದೆ.

ಚಂಡಮಾರುತಕ್ಕೆ ಈಗಾಗಲೇ ‘ರೆಮಲ್’ ಎಂದು ಹೆಸರಿಡಲಾಗಿದೆ. ಚಂಡಮಾರುತ ಪರಿಣಾಮದಿಂದಾಗಿ ಒಡಿಶಾದ ಕರಾವಳಿ ಭಾಗದಲ್ಲಿ ಭಾರಿ ಮಳೆ ತರಲಿದೆ.

ಮೇ 21ರಂದು ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಹಂತ ಹಂತವಾಗಿ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ. ಈ ವೇಳೆ ಗಾಳಿಯ ವೇಗ ಜಾಸ್ತಿಯೂ ಇರಲಿದೆ. ಬಾಂಗ್ಲಾದೇಶ, ಪಶ್ಚಿಮ ಬಂಗಾಳದ ಕರಾವಳಿ ಭಾಗಕ್ಕೆ ಮೇ 26ರ ಸಂಜೆ ಸೈಕ್ಲೋನ್ ಅಪ್ಪಳಿಸುವ ಸಂಭವವಿದೆ. ಹೀಗಾಗಿ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಈಗಾಗಲೇ ಐಎಂಡಿ ಎಚ್ಚರಿಕೆ ಕೊಟ್ಟಿದೆ.

Latest Indian news

Popular Stories