ರೇಣುಕಾಸ್ವಾಮಿ ಕೊಲೆ ಕೇಸ್ : ಮೂವರು ಆರೋಪಿಗಳು ಜೈಲಿನಿಂದ ಬಿಡುಗಡೆ..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮೂವರು ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಬೆಂಗಳೂರಿನ ಗಿರಿನಗರದ ಅರ್. ಕೇಶವಮೂರ್ತಿ, ವಿ. ಕಾರ್ತಿಕ್ ಮತ್ತು ಬಿಜಿ ರಸ್ತೆಯ ಎಲ್. ನಿಖಿಲ್ ನಾಯಕ್ ಅವರಿಗೆ ಹೈಕೋರ್ಟ್ ಕಳೆದ ವಾರ ಷರತ್ತುಬದ್ಧ ಜಾಮೀನು ನೀಡಿತ್ತು.

ತುಮಕೂರು ಜಿಲ್ಲಾ ಕಾರಾಗೃಹದಿಂದ ಮೂವರು ಆರೋಪಿಗಳು ಇಂದು ರಿಲೀಸ್ ಆಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ತುಮಕೂರು ಜೈಲಿನಲ್ಲಿದ್ದ ನಟ ದರ್ಶನ್ ಅವರ ಮೂವರು ಸಹಚರರು ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.

Latest Indian news

Popular Stories