ಸಿಎಂ ಪತ್ನಿಯಿಂದ ಮುಡಾ ಸೈಟ್ ವಾಪಾಸ್: ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಆರ್. ಅಶೋಕ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎಡುರಾದ ಬೆನ್ನಲ್ಲೇ ಅವರ ಪತ್ನಿ ಮೂಡಾದಿಂದ ಪಡೆದಿದ್ದ 14 ನಿವೇಶನಗಳನ್ನು ವಾಪಾಸ್ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಇದು ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಯಾಕ ಆರ್.ಅಶೋಕ್, ಇದು ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ. ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದಿದ್ದಾರೆ.

Latest Indian news

Popular Stories