ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ‘ಬ್ರೈನ್ ಹೆಲ್ತ್ ಕ್ಲಿನಿಕ್’ ಸೇವೆಗೆ ಚಾಲನೆ

ಬೆಂಗಳೂರು: ರಾಜ್ಯದ 32 ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ಸ್ಥಾಪಿಸಿರುವ ಮೆದುಳು ಆರೋಗ್ಯ ಕೇಂದ್ರಗಳ(‘ಬ್ರೈನ್ ಹೆಲ್ತ್ ಕ್ಲಿನಿಕ್’) ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಚಾಲನೆ ನೀಡಿದ್ದಾರೆ.

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ತಿಳಿಸಿದ್ದಾರೆ.

ರಾಜ್ಯದ 31 ಜಿಲ್ಲೆ ಮತ್ತು ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸೇರಿ 32 ಮೆದುಳು ಆರೋಗ್ಯ ಚಿಕಿತ್ಸಾಲಯ ಸ್ಥಾಪಿಸಲಾಗಿದೆ. ನರರೋಗಿಗಳಿಗೆ ಸಕಾಲಿಕ ಚಿಕಿತ್ಸೆ ಮತ್ತು ಆರೈಕೆಗಾಗಿ ನೋಡಲ್ ಕೇಂದ್ರಗಳಾಗಿ ಇವು ಕಾರ್ಯನಿರ್ವಹಿಸುತ್ತವೆ. ಪ್ರಾಥಮಿಕ ಹಂತದಲ್ಲಿ ರೋಗ ನಿರ್ಣಯ ಮೆದುಳಿನ ಆರೋಗ್ಯ ಜಾಗೃತಿ ಮೂಡಿಸಲು ನೆರವಾಗಲಿವೆ.

ಮಿದುಳಿನ ಆರೋಗ್ಯವನ್ನು ಕಾಪಾಡುವ ಮಹತ್ವವನ್ನು ಮನಗಂಡ ಕರ್ನಾಟಕ ರಾಜ್ಯಾದ್ಯಂತ ಸ್ಥಳೀಯ ಮೆದುಳಿನ ಆರೋಗ್ಯ ಚಿಕಿತ್ಸಾಲಯಗಳನ್ನು ಸ್ಥಾಪಿಸುವ ಮೂಲಕ ದೇಶಕ್ಕೆ ಮಾದರಿಯಾಗಿದೆ

Latest Indian news

Popular Stories