Bengaluru UrbanFeatured Story

ಹೈಕಮಾಂಡ್ ಸೂಚನೆ ಮೇರೆಗೆ ಡಿವಿ ಸದಾನಂದ ಗೌಡ ನಿವೃತ್ತಿ ಘೋಷಿಸಿದ್ದಾರೆ : ಬಿಎಸ್ ಯಡಿಯೂರಪ್ಪ

ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯ ನೀಡಿದ್ದು ಹೈಕಮಾಂಡ್ ಸೂಚನೆಯ ಮೇರೆಗೆ ಡಿವಿಸಿದಾನಂದ ಗೌಡ ನಿವೃತ್ತಿ ಘೋಷಿಸಿದ್ದಾರೆ

ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪ ಅವರು ಕಾಮಗಾರಿ ಸ್ಥಗಿತಗೊಂಡಿರುವಂತಹ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣೆಗೆ ನಿಲ್ಲಬೇಡಿ ಎಂದು ಹೈಕಮಾಂಡ್ ಹೇಳಿದೆ.

ಇನ್ನು ಮಂಡ್ಯದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿರುವ ಡಿವಿ ಸದಾನಂದ ಗೌಡ ಅವರು ಮಾತನಾಡಿ, ಪಕ್ಷದಲ್ಲಿ ಸ್ಥಾನಮಾನ ಸಿಕ್ಕಿದೆ. ನನಗೇನು ಕಡಿಮೆ ಆಗಿಲ್ಲ. 30 ವರ್ಷದಿಂದ ನಾನು ಎಲ್ಲಾ ಸ್ಥಾನವನ್ನು ಅಲಂಕರಿಸಿದ್ದೇನೆ. ನಮ್ಮ ಪಕ್ಷದಲ್ಲಿ ಅತ್ಯಂತ ಹೆಚ್ಚು ರಾಷ್ಟ್ರೀಯ ಉಪಾಧ್ಯಕ್ಷ, ರಾಜ್ಯದ ಅಧ್ಯಕ್ಷ ಆಗಿದ್ದೆ.ಅದು ಅಲ್ಲದೆ ಕೇಂದ್ರದಲ್ಲಿ ಏಳುವರ್ಷ ಮೋದಿ ಅವರ ಜೊತೆಯಲ್ಲಿ ಕೆಲಸ ಮಾಡಿದ್ದೇನೆ.ಅಲ್ಲದೆ ರಾಜ್ಯದ ಮುಖ್ಯಮಂತ್ರಿ ಕೂಡ ಆಗಿದ್ದೆ, ವಿರೋಧ ಪಕ್ಷದ ನಾಯಕ, ವಿರೋಧ ಪಕ್ಷದ ಉಪನಾಯಕ ಸೇರಿದಂತೆ ಅನೇಕ ಸ್ಥಾನಗಳಲ್ಲಿ ಕೆಲಸ ನಿರ್ವಹಿಸಿದ್ದೇನೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇದ್ದು ರಾಜ್ಯದಲ್ಲಿ ಸರ್ಕಾರ ತರುವಂತಹುದರಲ್ಲಿ ನನ್ನದು ಒಂದು ಸಣ್ಣ ಪಾತ್ರವಿದೆ ಎಂದು ತಿಳಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button