ಸಂಗಣ್ಣ ಕರಡಿ ಸಿಎಂ ಸಮ್ಮುಖದಲ್ಲಿ ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಕೋಪ್ಪಳ: ಈ ಬಾರಿ ಕೊಪ್ಪಳದ ಲೋಕಸಭಾ ಟಿಕೆಟ್ ಸಿಗದೇ ಮುನಿಸಿಕೊಂಡಿದ್ದ ಹಾಲಿ ಸಂಸದ (Koppal MP) ಸಂಗಣ್ಣ ಕರಡಿ (Sanganna Karadi) ಬಿಜೆಪಿಗೆ (BJP) ಗುಡ್ ಬೈ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್ (Congress) ನಾಯಕರ ಜೊತೆ ಸಂಗಣ್ಣ ಕರಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ನಾಳೆ ಅಥವಾ ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಇಂದು ಬಿಜೆಪಿಗೆ ಸಂಗಣ್ಣ ಕರಡಿ ಗುಡ್ ಬೈ ಹೇಳಿದ್ದಾರೆ. ಕೊಪ್ಪಳ ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಗಣ್ಣ ಕರಡಿ ರಾಜೀನಾಮೆ ನೀಡಿದ್ದಾರೆ. ಇಮೇಲ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ (BY Vijayendra) ತಮ್ಮ ರಾಜೀನಾಮೆ ಪತ್ರ ಕಳಿಸಿದ್ದಾರೆ ಎನ್ನಲಾಗಿದೆ.

Latest Indian news

Popular Stories