
Bengaluru UrbanFeatured Story
ಶಾಲೆಗಳಿಗೆ ಬಾಂಬ್ ಬೆದರಿಕೆ: ಆತಂಕ ಪಡಬೇಡಿ – ಡಿಸಿಎಂ ಶಿವಕುಮಾರ್ ಮನವಿ
ಬೆಂಗಳೂರು: ಬೆಂಗಳೂರಿನಲ್ಲಿ 15 ಕ್ಕೂ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು ಈ ನಡುವೆ ಶಾಲೆಗಳಿಗೆ ಪೊಲೀಸರು ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ , ಪೊಲೀಸರು ಶಾಲೆಗಳಿಗೆ ದೌಡಾಯಿಸಿ ತಪಾಸಣೆ ನಡೆಸುತ್ತಿದ್ದಾರೆ.
ಘಟನ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಶಿವಕುಮಾರ್ ಅವರು ಹೆದರಿಕೆ ಪಡಬೇಡಿ, ನಮ್ಮ ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳಲಿದೆ ಅಂತ ಹೇಳಿರು.ಪೊಲೀಸರು ಬೆದರಿಕೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ನಗರ ಪೊಲೀಸ್ ಆಯುಕ್ತರ ಬಳಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಅಂತ ತಿಳಿಸಿದರು.
ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ.




