ಬಡವರ ಕಷ್ಟಕ್ಕೆ ಸ್ಪಂದಿಸದ ಬಿಜೆಪಿಗೆ ಮತ ಯಾಕೆ ನೀಡಬೇಕು?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಲೋಕಸಭೆ ಚುನಾವಣೆಗೆ ಸಿದ್ಧತೆ ಸಂಬಂಧ ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಬೆಂಕಿ ಹತ್ತಿಕೊಳ್ಳಲಿದೆ ಎಂಬ ರಾಹುಲ್ ಹೇಳಿಕೆ ವಿರುದ್ಧ ಪ್ರಧಾನಿ ಮೋದಿ ಆಕ್ರೋಶ

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಸರಣಿ ಪೋಸ್ಟ್​ ಮಾಡಿರುವ ಸಿಎಂ, ರಾಜ್ಯದ ಜನರಿಗೆ ಬರದ ಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮತದಾರರಿಗೆ ಸಿಎಂ ಪ್ರಶ್ನೆ ಮಾಡಿದ್ದಾರೆ.

ಬರಪರಿಹಾರ ನಿರ್ಧರಿಸುವ ಉನ್ನತಾಧಿಕಾರ ಸಮಿತಿ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಬರಪರಿಹಾರಕ್ಕೆ ಸಮ್ಮತಿ ಸೂಚಿಸಿಲ್ಲ. ಮೇಕೆದಾಟು ಯೋಜನೆ, ಮಹದಾಯಿ ಯೋಜನೆಗೂ ಇದುವರೆಗೆ ಅನುಮತಿ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಚಕಾರವೆತ್ತದೇ ಕೇಂದ್ರ ಬಿಜೆಪಿ ಸರ್ಕಾರದ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂಬ ಭರವಸೆಯಿದೆ ಎಂದು ನುಡಿದಿದ್ದಾರೆ.

Latest Indian news

Popular Stories