Bengaluru UrbanFeatured Story

ಜೂನ್ ಒಳಗೆ ನನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ – ಶಾಸಕ ಸಿ.ಪುಟ್ಟರಂಗಶೆಟ್ಟಿ .

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ ಒಳಗೆ ನನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಬರವಸೆ ನೀಡಿದ್ದಾರೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ‘ಜೂನ್‌ನಲ್ಲಿ ನಿನಗೆ ಮಂತ್ರಿ ಸ್ಥಾನ ಕೊಡ್ತೀನಯ್ಯ’ಎಂದು ಖುದ್ದಾಗಿ ಹೇಳಿದ್ದಾರೆ.

ಈ ಮೊದಲು ಉಪಸಭಾಪತಿ ಸ್ಥಾನ ಕೊಟ್ಟಿದ್ದರು. ಅದರೆ ನಾನೇ ಒಪ್ಪಲಿಲ್ಲ. ಆದರೆ ನನಗೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಬಿಟ್ಟ ವಿಚಾರ ವಾಗಿದ್ದು, ಬಲವಂತ ಮಾಡಲು ನಾನ್ಯಾರು?ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹೈಕಮಾಂಡ್‌ಗೆ ಗೊತ್ತಿದೆ. ಇನ್ನು ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇಬ್ಬರೂ ಎಲ್ಲಾ ಹಂತದಲ್ಲೂ ಒಗ್ಗಟ್ಟಾಗಿಯೇ ಹೋಗುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button