10 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗ್ಲಿ – ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್

ರಾಯಚೂರು, ಡಿಸೆಂಬರ್‌ 01:10 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗ್ಲಿ ಎಂದು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಹೌದು, ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ವಿಚಾರವಾಗಿ ಹೇಳಿಕೆಯನ್ನ ನಿಲ್ಲಿಸುವಂತೆ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಖಡಕ್‌ ಆದೇಶ ನೀಡಿದ್ದು, ಸದ್ಯ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ವಿಚಾರವಾಗಿ ಸೈಲೆಂಟ್‌ ಆಗಿದ್ರೆ, ಬಿಜೆಪಿ ಶಾಸಕರೊಬ್ಬರು ಮುಂದಿನ ಹತ್ತು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿ ಎಂದು ಹೇಳಿದ್ದಾರೆ.

ರಾಯಚೂರು ನಗರದಲ್ಲಿ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ರಾಯಚೂರು ನಗರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾತನಾಡಿ ಮುಂದಿನ ಹತ್ತು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಲಿ ಎಂದು ಹೇಳಿದ್ದು, ಬಿಜೆಪಿ ಶಾಸಕರ ಈ ಹೇಳಿಕೆ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

Latest Indian news

Popular Stories