ಅನೇಕಲ್ ಭಾರೀ ಪಟಾಕಿ ದುರಂತದಲ್ಲಿ 14 ಮಂದಿ ಮೃತ್ಯು : ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ

ಬೆಂಗಳೂರು,; ಆನೇಕಲ್‌ನ ಪಟಾಕಿ ಗೋಡಾನ್‌ನಲ್ಲಿ ನಿನ್ನೆ ನಡೆದ ದುರಂತದಲ್ಲಿ ಮಡಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಶನಿವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು

ಶನಿವಾರ ತಡರಾತ್ರಿ ತನಕ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳ ಯಶಸ್ವಿಯಾಗಿದೆ.ಗೋಡಾನ್‌ನಲ್ಲಿ 20 ಜನರು ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ದುರಂತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌ನಲ್ಲಿ, ‘ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸಮೀಪ ಅತ್ತಿಬೆಲೆಯ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 12 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ದುರ್ಘಟನೆ ನಡೆದ ಸ್ಥಳಕ್ಕೆ ನಾಳೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದೇನೆ. ಮೃತ ಕಾರ್ಮಿಕರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಹೇಳಿದ್ದಾರೆ.

Latest Indian news

Popular Stories