ಸಿಎಂ ಸಿದ್ದರಾಮಯ್ಯ’ ಬರುವ ದಾರಿಯಲ್ಲೇ ಭೀಕರ ಅಪಘಾತ ನಡೆದು ಇಬ್ಬರು ದಂಪತಿಗಳಿಗೆ ಗಂಭೀರ ಗಾಯ

ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರು, ಪಟಾಕಿ ದುರಂತ ನಡೆದ ಸ್ಥಳಕ್ಕೆ ಪರಿಶೀಲನೆ ನಡೆಸಲು ಬರುತ್ತಿದ್ದ ದಾರಿಯಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ದಂಪತಿಗಳಿಗೆ ಗಂಭೀರ ಗಾಯಗಳಾದ ಘಟನೆ ನೇಕಲ್ ತಾಲೂಕಿನ ಬೆಂಗಳೂರು-ಚೆನೈ ಹೆದ್ದಾರಿಯಲ್ಲಿ ನಡೆದಿದೆ.

ಇದೇ ವೇಳೆ ಅಪಘಾತ ಸಂಭವಿಸಿದೆ. ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳಿಗೆ ಗಂಭೀರ ಗಾಯಗಳಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ ಪರಾರಿಯಾದ ಲಾರಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.

Latest Indian news

Popular Stories