ಅತ್ತಿಬೆಲೆ ಅಗ್ನಿ ದುರಂತ : ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

ಬೆಂಗಳೂರು : ಅತ್ತಿಬೆಲೆ ಅಗ್ನಿದುರಂತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು.ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅತ್ತಿಬೆಲೆಯಲ್ಲಿ ನಡೆದ ಅಗ್ನಿದುರಂತದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ 3.00 ಗಂಟೆ ಸಮಯದಲ್ಲಿ ತಮಿಳುನಾಡಿನಿಂದ ಟ್ರಕ್ ಗಳಲ್ಲಿ ಪಟಾಕಿಗಳು ಬಂದಿದ್ದು, ಬೆಂಕಿ ಹೇಗೆ ಪಟಾಕಿಗಳ ಮೇಲೆ ಬಿತ್ತು ಎನ್ನುವಿ ನಿಖರ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ಇಲ್ಲಿ ಪರಿಶೀಲಿಸಿದ ಮೇಲೆ, ಸ್ಪೋಟಕಗಳ ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂದು ಕಂಡುಬಂದಿದೆ ಎಂದರು.

Latest Indian news

Popular Stories