ಎಸ್ ಟಿ ಸೋಮಶೇಖರ್ ಶಿವರಾಮ ಹೆಬ್ಬಾರ್ ದಾರಿ ತಪ್ಪಿದ ಮಕ್ಕಳು : ಆರ್.ಅಶೋಕ್ ಹೇಳಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹಬ್ಬಾರ್ ಅವರು ದಾರಿ ತಪ್ಪಿದ ಮಕ್ಕಳು ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಈಗಾಗಲೇ ಇಬ್ಬರೂ ಶಾಸಕರಿಗೂ ಪಕ್ಷ ನೋಟಿಸ್ ನೀಡಿದೆ.

ಎಂಪಿ ಚುನಾವಣೆ ಫಲಿತಾಂಶದ ಬಳಿಕ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು.

ಈ ವರ್ಷ ಬಿಬಿಎಂಪಿ ಚುನಾವಣೆ ನಡೆಸುವುದರ ಕುರಿತು ಮಾತನಾಡಿದ ಅವರು, ನಮಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇಲ್ಲವಾಗಿದೆ mp ಚುನಾವಣೆ ಫಲಿತಾಂಶ ನೋಡಿ ಸರ್ಕಾರ ನಿರ್ಧರಿಸಬಹುದು ಮುದಿ ಪ್ರಧಾನಿ ಆಗುತ್ತಾರಾ ಇಲ್ಲವಾ ಅಂತ ನೋಡಿ ನಿರ್ಧರಿಸಬಹುದು ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಸರ್ಕಾರ ತೀರ್ಮಾನ ಮಾಡಬಹುದು ಎಂದು ವಿಪಕ್ಷ ನಾಯಕ ಹೇಳಿಕೆ ನೀಡಿದರು.

Latest Indian news

Popular Stories