ಸಿಎಂ ಸಿದ್ದರಾಮಯ್ಯಗೆ’ ಅನಾರೋಗ್ಯ ಹಿನ್ನೆಲೆ : ಸೋಮವಾರ 1 ದಿನ ವಿಧಾನಸಭಾ ಕಲಾಪ ಮುಂದುಡಿಕೆ

ಬೆಂಗಳೂರು: ಇಂದು ವಿಧಾನಸಭೆ ಬಜೆಟ್ ಅಧಿವೇಶನಕ್ಕೆ ತೆರೆ ಬೀಳಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪ ಸೋಮವಾರ ಒಂದು ದಿನ ಮಾತ್ರ ಮುಂದೂಡಲಾಗಿದೆ. ಮಂಗಳವಾರ ರಾಜ್ಯಸಭಾ ಚುನಾವಣೆ ಹಿನ್ನೆಲೆ ಕಲಾಪ ನಡೆಯುವುದಿಲ್ಲ ಎನ್ನಲಾಗುತ್ತಿದೆ.

ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕಿತ್ತು. ಆದರೆ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಒಂದು ದಿನದವರೆಗೆ ಮಾತ್ರ ವಿಧಾನಸಭೆ ಕಲಾಪ ಮುಂದೂಡಲಾಗಿದೆ.ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಉತ್ತರ ನೀಡಲಿದ್ದಾರೆ.

ಸೋಮವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಅಧಿವೇಶನ ಎರಡು ದಿನ ಕಲಾಪ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇತ್ತೀಚಿಗೆ ಗಂಟಲು ನೋವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಳಲುತ್ತಿದ್ದಾರೆ.

Latest Indian news

Popular Stories