ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಿಸಿದ ಅಧಿಕಾರಿಯ ವಿರುದ್ಧ ಕ್ರಮ ವಹಿಸಿ – ಆರ್.ಅಶೋಕ್ ಒತ್ತಾಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅಧಿಕಾರಿಗಳ ಕೈಯಲ್ಲೇ ಇದ್ದು, ಸಚಿವರು ಮನೆಯಲ್ಲಿ ಮಜಾ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ವಾಣಿಯನ್ನು ಬದಲಿಸಿದ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಹುಚ್ಚುಚ್ಚಾಗಿ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ವಿಧಾನಸೌಧದ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ಘೋಷವಾಕ್ಯವಿದೆ. ಯಾರೋ ಕಾರ್ಯದರ್ಶಿಗಳು ಬಂದು ಅದನ್ನು ತೆಗೆದುಹಾಕಿ ಎಂದರೆ ಹೇಗಿರುತ್ತದೆ? ಶಾಲೆಯಲ್ಲಿ ಕೈ ಮುಗಿದು ಒಳಗೆ ಬನ್ನಿ ಎಂದರೆ ತಪ್ಪೇನು? ಬೇರೆ ದೇಶದ ಅಧ್ಯಕ್ಷರು ನಮ್ಮ ದೇಶಕ್ಕೆ ಬಂದರೆ ಕೈ ಮುಗಿಯುತ್ತಾರೆ. ಇದೇ ನಮ್ಮ ಸಂಸ್ಕೃತಿ ಎಂದರು.

ಈ ಕಾಂಗ್ರೆಸ್‌ ಸರ್ಕಾರಕ್ಕೆ ಕೇಡುಗಾಲ ಬಂದಿದೆ. ಯಾವುದೇ ಆದೇಶವೇ ಇಲ್ಲದೆ ಈ ಘೋಷವಾಕ್ಯವನ್ನು ಬದಲಿಸಿದ್ದಾರೆ. ಇಲ್ಲಿ ಸರ್ಕಾರ ಸತ್ತಿದೆಯೇ ಬದುಕಿದೆಯೇ ಎಂದು ಗೊತ್ತಿಲ್ಲ. ಕಳೆದ ಬಾರಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ. ಅವರಿಗೆ ಸರ್ಕಾರದ ಮೇಲೆ ಯಾವುದೇ ಹಿಡಿತವೂ ಇಲ್ಲ. ಅವರು ಆಯವ್ಯಯವನ್ನು ಮಂಡಿಸಿದಾಗಲೇ ಅವರು ಮಂಡಿಸಿದ್ದಲ್ಲ ಎಂದು ಗೊತ್ತಾಯಿತು ಎಂದರು.

Latest Indian news

Popular Stories