ಬೆಂಗಳೂರಿನಲ್ಲಿ ತಂಪೆರೆದ ವರುಣ, ನಗರದ ವಿವಿಧೆಡೆ ಆಲಿಕಲ್ಲು ಮಳೆ

ಬೆಂಗಳೂರು, ಮೇ 06: ನಗರದ ಹಲವೆಡೆ ಬಿರುಗಾಳಿ ಸಮೇತ ಮಳೆ (Rain) ಶುರುವಾಗಿದೆ. ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇದೀಗ ನಗರದ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸೇರಿ ಹಲವೆಡೆ ಆಲಿಕಲ್ಲು (HailStorms) ಜೊತೆಗೆ ಮಳೆರಾಯ ಆರ್ಭಟಿಸಿದ್ದಾನೆ.

ಬರ ಆವರಿಸಿದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿದೆ. ಇಂದು ಮಳೆ ಜೊತೆಗೆ ಗಾಳಿಯ ಪ್ರಮಾಣ ಕೂಡ ಜಾಸ್ತಿ ಇದೆ. ಬಿಸಿಲಿನಿಂದ ಬಸವಳಿದಿದ್ದ ರಾಜಧಾನಿಗೆ ವರುಣ ಮತ್ತೊಮ್ಮೆ ಎಂಟ್ರಿ ಕೊಡುವ ಮೂಲಕ ತಂಪೆರೆದಿದ್ದಾನೆ.

Latest Indian news

Popular Stories