Bengaluru Urban

ಸಾಲು ಮರದ ತಿಮ್ಮಕ್ಕ ಸ್ಥಿತಿ ಚಿಂತಾಜನಕ – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಂಗಳೂರು: ಸಾಲುಮರದ ತಿಮ್ಮಕ್ಕ ತೀವ್ರ ಅನಾರೋಗ್ಯಕ್ಕೀಡಾಗಿದ್ದು,ಬೆಂಗಳೂರಿನ ಜಯನಗರ ಆಫೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಕಳೆದ 17 ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಸಾಲು ಮರದ ತಿಮ್ಮಕ್ಕ ಬಳಲುತ್ತಿದ್ದಾರೆ.

113 ವರ್ಷದ ಹಿರಿಯ ಶತಾಯುಷಿ ಸಾಲುಮರದ ತಿಮ್ಮಕ್ಕ ವಯೋಸಹಜ ಅನಾರೋಗ್ಯಕ್ಕೀಡಾಗಿದ್ದಾರೆ.

ನೂರಾರು ಮರಗಳ ಪಾಲನೆ ಪೋಷಣೆ ಮೂಲಕ ವೃಕ್ಷಮಾತೆಯೆಂದೇ ಹೆಸರಾಗಿರುವ ಸಾಲುಮರದ ತಿಮ್ಮಕ್ಕ, ಈವರೆಗೆ ಲಕ್ಷಾಂತರ ಸಸಿ ನೆಟ್ಟಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button