ಜನರ ಕಿವಿಗೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ಕಾಂಗ್ರೆಸ್ ಸರ್ಕಾರ-ಸಿ.ಟಿ ರವಿ

ಬೆಂಗಳೂರು: ಜೂನ್.16: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ 3 ರೂಪಾಯಿ, ಡಿಸೇಲ್ ಬೆಲೆಯಲ್ಲಿ ಮೂರೂವರೆ ರೂಪಾಯಿ ಏರಿಕೆ ಮಾಡಿದೆ. ಸರ್ಕಾರದ ಈ ನಡೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.ಜೂನ್.16: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ 3 ರೂಪಾಯಿ, ಡಿಸೇಲ್ ಬೆಲೆಯಲ್ಲಿ ಮೂರೂವರೆ ರೂಪಾಯಿ ಏರಿಕೆ ಮಾಡಿದೆ. ಸರ್ಕಾರದ ಈ ನಡೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕಿವಿಯಲ್ಲಿ ದಾಸವಾಳ ಮುಡಿದು, ಕೈಯಲ್ಲಿ ತೆಂಗಿನ ಚಿಪ್ಪು ಹಿಡಿದು ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪೆಟ್ರೋಲ್‌ ಹಾಗೂ ಡಿಸೇಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ. ರಾಜ್ಯದ ಜನತೆಯ ಕಿವಿಯ ಮೇಲೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ. ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್.

ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್‌ ಬೆಲೆಯನ್ನು ಪ್ರತಿ ಲೀಟರಿಗೆ 3 ರೂಪಾಯಿ ಹಾಗೂ ಡಿಸೇಲ್‌ ಬೆಲೆಯನ್ನು ಪ್ರತಿ ಲೀಟರಿಗೆ 3.50 ರೂಪಾಯಿಯಷ್ಟು ಹೆಚ್ಚಿಸಿದೆ. ಇದನ್ನು ವಿರೋಧಿಸಿ ಭಾರತೀಯ ಜನತಾ ಯುವ ಮೋರ್ಚ, ಚಿಕ್ಕಮಗಳೂರು ಜಿಲ್ಲೆ ಇದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಕೆಲ ದಿನದ ಹಿಂದೆ ರಾಜ್ಯ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ ಎಂದ ನೀವು ಈಗ ದಿಢೀರ್‌ ಅಂತ ಮಾಡಿದ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ..? ನಿಮಗೆ ನಿಜಕ್ಕೂ ಬಡವರ ಮೇಲೆ ಕಾಳಜಿ ಇದ್ದರೆ, ಕೂಡಲೇ ಬೆಲೆ ಏರಿಕೆ ಆದೇಶವನ್ನು ಹಿಂಪಡೆಯಿರಿ ಎಂದು ಆಗ್ರಹಿಸಿದರು.

ಪೆಟ್ರೋಲ್ ಡಿಸೇಲ್‌ ಮೇಲೆ ಸೆಸ್ ವಿಧಿಸಿದ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ. ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ.

ರಾಜ್ಯದಲ್ಲಿ ಇಂದಿನಿಂದ ಪೆಟ್ರೋಲ್ ಬೆಲೆ ಸರಾಸರಿ ಮೂರೂ ರೂಪಾಯಿ ಹಾಗು ಡಿಸೇಲ್ ಬೆಲೆ ಸರಾಸರಿ ಮೂರುವರೆ ರೂಪಾಯಿಯಷ್ಟು ಜಾಸ್ತಿ ಮಾಡಿದೆ. ನಾನು ಬಡವರ ಪರ ನಾನು ಬಡವರ ಪರ ಎಂದು ಬೊಬ್ಬೆ ಹೊಡೆಯುವ ಮುಖ್ಯಮಂತ್ರಿಯವರೇ ಇದೆ ಏನು ನಿಮ್ಮ ಬಡವರ ಪರ ನೀತಿ?

ನಾಚಿಕೆಯಾಗಬೇಕು, ನಿಮ್ಮ ಜನ ವಿರೋಧಿ ಸರ್ಕಾರಕ್ಕೆ ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಸಿ.ಟಿ ರವಿ ಕಿಡಿಕಾರಿದ್ದಾರೆ.

Latest Indian news

Popular Stories