‘KRS’ ಆಣೆಕಟ್ಟಿನ ಸುತ್ತಲಿನ ಗಣಿಗಾರಿಕೆಗೆ ಸಂಬಂಧಿಸಿದ ತಕರಾರು ಪರಿಹಾರಕ್ಕೆ ಸಮಿತಿಯ ತೀರ್ಮಾನ ಅಂತಿಮ : ಹೈಕೋರ್ಟ್

ಬೆಂಗಳೂರು: ಕೆಆರ್‌ಎಸ್‌ ಜಲಾಯಶಯದ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಅದರಾಚೆಗೂ ಕೂಡಾ ಯಾವುದೇ ಕಲ್ಲು ಗಣಿಗಾರಿಕೆ ಹಾಗೂ ಸ್ಫೋಟಕ ಚಟುವಟಿಕೆಗಳಿಗೆ ಸಂಬಂಧಿಸಿದ ತಕರಾರುಗಳಿಗೆ ಪರಿಹಾರ ಪಡೆಯಲು, ಕರ್ನಾಟಕ ರಾಜ್ಯ ಜಲಾಶಯಗಳ ಸುರಕ್ಷಿತ ಸಮಿತಿಯ ಮುಂದೆಯೇ ಮನವಿ ಸಲ್ಲಿಸಬೇಕು.
ಈ ವಿಚಾರದಲ್ಲಿ ಸಮಿತಿಯ ತೀರ್ಮಾನವೇ ಅಂತಿಮ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಆದೇಶಿಸಿದೆ.

ಕಾವೇರಿ ನದಿಯು ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕೇರಳಗಳಿಗೆ ನೀರುಣಿಸುವ ಜೀವನದಿಯಾಗಿದ್ದು, ಇದಕ್ಕೆ ಕಟ್ಟಲಾಗಿರುವ ಕೆಆರ್‌ಎಸ್‌ (ಕೃಷ್ಣರಾಜ ಸಾಗರ) ಅಣೆಕಟ್ಟಿನ ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ತೆರನಾದ ಗಣಿಗಾರಿಕೆ ಮತ್ತು ಅದಕ್ಕೆ ಹೊಂದಿಕೊಂಡಂತಹ ಚಟುವಟಿಕೆಗಳು ಅತ್ಯಂತ ಅಪಾಯಕಾರಿ. ಆದ್ದರಿಂದ, ಅಣೆಕಟ್ಟಿಗೆ ಕಿಂಚಿತ್ತೂ ಧಕ್ಕೆಯಾಗಂತೆ ನೋಡಿಕೊಳ್ಳಬೇಕಾದ ತುರ್ತು ಇಂದು ಹೆಚ್ಚಿದೆ ಎಂದು ಹೈಕೋರ್ಟ್ ತೀವ್ರ ಕಾಳಜಿ ವ್ಯಕ್ತಪಡಿಸಿದೆ.

ಆಣೆಕಟ್ಟಿಗೆ ಏನಾದರೂ ಆದರೆ ಗತಿಯೇನು? ಕೆಆರ್‌ಎಸ್‌ ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಗಣಿಗಾರಿಕೆಯ ಚಟುವಟಿಕೆಗಳು ಅಪಾಯ ತಂದೊಡ್ಡಬಲ್ಲವು. ಇಂತಹ ಚಟುವಟಿಕೆಗಳ ಬಗ್ಗೆ ಉಂಟಾಗುವ ತಕರಾರುಗಳನ್ನು ಈಗಾಗಲೇ ಶಾಸನಾತ್ಮಕವಾಗಿ ರೂಪುಗೊಂಡಿರುವ ತಜ್ಞರ ಸಮಿತಿಯೇ ಪರಾಮರ್ಶಿಸಬೇಕು. ಅದು ಯಾವುದೇ ಕ್ರಮ ಕೈಗೊಳ್ಳಲು ಯುಕ್ತವಿದೆ. ಈ ವಿಷಯದಲ್ಲಿ ತೀರ್ಮಾನ ಪ್ರಕಟಿಸಲು ಕೋರ್ಟ್ ಏನೂ ತಜ್ಞ ಅಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

Latest Indian news

Popular Stories