ಬೆಂಗಳೂರು: ಶೀಘ್ರವೇ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್, ಶೀಘ್ರವೇ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು, ಆದಷ್ಟು ಬೇಗ ಮೊದಲ ಪಟ್ಟಿ ಪ್ರಕಟವಾಗಲಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಜೊತೆಗೆ ಮಾತನಾಡ್ತಾರೆ. ನಾವು ಪಟ್ಟಿಗೆ ಕಾಯುತ್ತಿದ್ದೇವೆ ಎಂದರು.