Bengaluru Urban

ಯಡಿಯೂರಪ್ಪ ಬಂಧನಕ್ಕೆ ವಿಧಿಸಿರುವ ನಿರ್ಬಂಧ ಮುಂದುವರಿಸಿದ ಹೈಕೋರ್ಟ್

ಬೆಂಗಳೂರು ಆಗಸ್ಟ್‌ 02: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗೆ ಹಾಜರಾಗಲು ಈ ಹಿಂದೆ ನೀಡಿದ್ದ ವಿನಾಯ್ತಿಯನ್ನು ಹೈಕೋರ್ಟ್ ವಿಸ್ತರಿಸಿದೆ. ಹಾಗಾಗಿ ಸದ್ಯಕ್ಕೆ ಯಡಿಯೂರಪ್ಪಗೆ ಯಾವುದೇ ಬಂಧನದ ಭೀತಿ ಇಲ್ಲ ಮತ್ತು ಅವರು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕಿಲ್ಲ.

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಪರ ವಕೀಲರು ಅರ್ಜಿ ತಿದ್ದುಪಡಿಗಾಗಿ ಮನವಿ ಮಾಡಲಾಗಿದೆ. ಸರ್ಕಾರದಿಂದ ಇದಕ್ಕೆ ಆಕ್ಷೇಪ ವಿಲ್ಲದಿದ್ದಲ್ಲಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದಕ್ಕೆ ಪೀಠ, ಸರ್ಕಾರದ ಪರ ವಕೀಲರನ್ನು ಅರ್ಜಿ ತಿದ್ದುಪಡಿಗೆ ಆಕ್ಷೇಪ ಇಲ್ಲವೇ ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರದ ವಕೀಲರು, ಆಕ್ಷೇಪಣೆ ಇಲ್ಲ ಎಂದು ಹೇಳಿದರು. ಇದೇ ವೇಳೆ ಯಡಿಯೂರಪ್ಪರವನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಕೋರಿ ಸಂತ್ರಸ್ತೆಯ ಪರ ವಕೀಲರು, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿತು.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button